|ಮೈಸೂರು : ಸಾಕಷ್ಟು ವಿವಾದ- ವಾದ, ಚರ್ಚೆಗಳ ಬಳಿಕ ಕೊನೆಗೂ ವಿಷ್ಣುದಾದಾ ಸ್ಮಾರಕ ನಿರ್ಮಾಣಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಚಾಲನೆ ನೀಡಿದ್ದಾರೆ.
ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ವಿಷ್ಣು ಸ್ಮಾರಕ ವಿಶೇಷತೆಗಳೇನು..?
ಸುಮಾರು 11 ಕೋಟಿ ವೆಚ್ಚದಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮಕ್ಕೆ ನೀಡಲಾಗುತ್ತಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪೌಂಡ್ ಇರುತ್ತದೆ.