ನವದೆಹಲಿ: ಡಾ. ಮಂಜುನಾಥ್ ಅವರು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಈ ಕುರಿತು ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಇದುವರೆಗೂ ನಾನು ಅವರನ್ನು ಭೇಟಿ ಮಾಡಿರಲಿಲ್ಲ. ನಾವಣೆಗೆ ಸಹಕಾರ ಕೇಳಿ ಧನ್ಯವಾದ ಹೇಳಿದ್ದೇನೆ ಎಂದರು.
ಇದೊಂದು ಧರ್ಮ ಯುದ್ಧ. ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡಲು ಅಲ್ಲ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಡಾ. ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಸೆಣಸಲಿದ್ದಾರೆ.