Draupadi Murmu : ಕೋವಿಡ್ ಸಮಯದಲ್ಲಿ ಮಾನವ ಹಕ್ಕುಗಳ ಆಯೋಗದ ಕಾರ್ಯ ಶ್ಲಾಘನೀಯ – ರಾಷ್ಟ್ರಪತಿ
ಕೋವಿಡ್ ಸಮಯದಲ್ಲಿ ಮಾನವ ಹಕ್ಕುಗಳ ಆಯೋಗವು ಮಾಡಿರುವ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ದೆಹಲಿಯಲ್ಲಿಂದು ನಡೆದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು , ಹುಟ್ಟುವ ಪ್ರತಿಯೊಂದು ಮನುಷ್ಯರಿಗೂ ಸಮಾನವಾದ ಹಕ್ಕಿದೆ. ಇಲ್ಲಿ ಯಾರೂ ಕೀಳಲ್ಲ, ಯಾರೂ ಮೇಲಲ್ಲ ಎನ್ನುವುದು ಮಾನವ ಹಕ್ಕುಗಳ ಧ್ಯೇಯವಾಗಿದೆ ಎಂದು ರಾಷ್ಟ್ರಪತಿ ಹೇಳಿದರು.
ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಗೆ ಸಂಬಂಧಿಸಿದ ಪುಸ್ತಕವು 500ಕ್ಕೂ ಹೆಚ್ಚು ಭಾಷೆಗಳಲ್ಲಿ ತರ್ಜುಮೆಯಾಗಿದೆ. ಇದು ನಮ್ಮ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.
ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಜನರಿಗೆ ಹೆಚ್ಚಿನ ಅರಿವು ಅಗತ್ಯವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಮಾಡಬೇಕಿದೆ. ತಮ್ಮ ಹಕ್ಕುಗಳು ಏನು ಎಂಬ ಬಗ್ಗೆ ಪ್ರತಿಯೊಬ್ಬರಿಗೂ ತಿಳಿವಳಿಕೆ ಅಗತ್ಯ. ಎಲ್ಲರಿಗೂ ಸಮಾನ ನ್ಯಾಯ, ಸಮಾನ ಹಕ್ಕುಗಳನ್ನು ದೊರಕಿಸಿಕೊಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರಾಷ್ಟ್ರಪತಿಗಳು ಹೇಳಿದರು.
Draupadi Murmu : Human Rights Commission’s work during Covid commendable – President








