Draupadi Murmu ನೂತನ ರಾಷ್ಟ್ರಪತಿ | ರಾಜ್ಯ ಬಿಜೆಪಿ ಸಂಭ್ರಮಾಚರಣೆ
ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜಯಗಳಿಸಿ ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ರಾಜ್ಯದ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಡೋಲು ಬಾರಿಸಿ ಸಂಭ್ರಮಿಸಿದ್ದಾರೆ.
ಇತ್ತ ಬಾಗಲಕೋಟೆ ಬಿಜೆಪಿ ವತಿಯಿಂದಲೂ ಸಂಭ್ರಮಾಚರಣೆ ನಡೆದಿದ್ದು, ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.