Droupadi Murmu: ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ದ್ರೌಪದಿ ಮುರ್ಮು
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಳಗ್ಗೆ ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸೇನಾ ಆಸ್ಪತ್ರೆಯಲ್ಲಿ (ರೆಫರಲ್ ಮತ್ತು ರಿಸರ್ಚ್) ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
64 ವರ್ಷದ ದ್ರೌಪದಿ ಮುರ್ಮು ಕಳೆದ ಅಕ್ಟೋಬರ್ 16 ರಂದು ಎಡಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮುರ್ಮು ಅವರು ಈ ವರ್ಷ ಜುಲೈ 25 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
Draupadi Murmu : President Draupadi Murmu underwent cataract surgery