ಕೋವಿಡ್ ಪ್ರತಿಕಾಯ ಪತ್ತೆ ಕಿಟ್ ರೂಪಿಸಿದ DRDO – ಕೇವಲ 75 ನಿಮಿಷದಲ್ಲೇ ಫಲಿತಾಂಶ..!
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ಕೋವಿಡ್–19 ಪ್ರತಿಕಾಯಗಳನ್ನು (ಆ್ಯಂಟಿಬಾಡಿ) ಪತ್ತೆ ಹಚ್ಚುವ ಕಿಟ್ ಅನ್ನು ಅಭಿವೃದ್ಧಿಪಡಿಸಿದ್ದು, ಈ ಕಿಟ್ ಕೇವಲ 75 ನಿಮಿಷಗಳಲ್ಲಿ ಫಲಿತಾಂಶ ನೀಡುತ್ತದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವಾಲಯವು ಮಾಹಿತಿ ನೀಡಿದೆ.
ಈ ಕಿಟ್ ಗೆ ‘ಡಿಪ್ಕೋವ್ಯಾನ್’ ಎಂದು ಹೆಸರಿಡಲಾಗಿದೆ. ಈ ಕಿಟ್ನ ನಿಗದಿತ ಅವಧಿ 18 ತಿಂಗಳುಗಳುಗಳು. ಇದು ನ್ಯೂಕ್ಲಿಯೊಕ್ಯಾಪ್ಸಿಡ್ , ಸಾರ್ಸ್–ಕೋವಿನ್–2 ಪ್ರೊಟೀನ್ಗಳನ್ನು ಪತ್ತೆ ಮಾಡುತ್ತದೆ. ನವದೆಹಲಿ ಮೂಲದ ವ್ಯಾನ್ಗಾರ್ಡ್ ಡಯಾಗ್ನೋಸ್ಟಿಕ್ಸ್ ಪ್ರೈ ಲಿ. ಜತೆಗೂಡಿ ಈ ಕಿಟ್ ಅನ್ನು ಅಭಿವೃದ್ಧಿ ಪಡಿಸಲಾಗಿದ್ದು, ಜೂನ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ