ಯಾದಗಿರಿ: ಜಿಲ್ಲೆಯಲ್ಲಿನ ಸುಮಾರು 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ ಸುಶೀಲಾ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ವಾರ್ನಿಂಗ್ ನೀಡಿದ ಅವರು, 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. 36 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಸಲಾಗುತ್ತಿದೆ. 28 ಗ್ರಾಮಗಳಿಗೆ ಹೊಸದಾಗಿ ಕೊಳವೆಬಾವಿ ಕೊರೆಯಿಸಿ ನೀರು ಪೂರೈಸಲಾಗುತ್ತಿದೆ. 1 ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದೆ ತೊಂದರೆಯಾಗದಂತೆ ಈಗಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಈಗಾಗಲೇ ನಾವು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದೇವೆ. ನೀರಿನ ಸಮಸ್ಯೆ ಎದುರಿಸಬಹುದಾದ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಗುರುತಿಸಿ, ಮಾಲೀಕರೊಂದಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿ ಅನ್ವಯ ಒಡಂಬಡಿಕೆ ಮಾಡಿಕೊಳ್ಳಬೇಕು ಎಂದು ಹೇಲಿದ್ದಾರೆ. ದುರಸ್ತಿ ಇರುವ ಪೈಪ್‌ಲೈನ್‌ಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ನೀರು ಪೋಲಾಗದಂತೆ ಎಚ್ಚಕೆ ವಹಿಸಬೇಕು. ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ.