ಸರ್ಕಾರಿ ಶಾಲೆ ಬಾಗಿಲು ಮುರಿದು ಎಣ್ಣೆ ಪಾರ್ಟಿ ಮಾಡಿದ ಪುಂಡರು….
ಪುಂಡರು ಸರ್ಕಾರಿ ಶಾಲೆ ಬಾಗಿಲು ಮುರಿದು ಎಣ್ಣೆ ಪಾರ್ಟಿ ಮಾಡಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೋಕಿನಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯ ಕರ್ನಾಟಕ ಪಬ್ಲಿಕ್ ಉರ್ದು ಶಾಲೆಯಲ್ಲಿ ಘಟನೆ ನಡೆದಿದೆ. ಈ ಶಾಲೆ ಪುಂಡರು, ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ನಿನ್ನೆ ರಾತ್ರಿ ಕೆಲವು ಪುಂಡರು ಶಾಲೆಯ ಬಾಗಿಲು ಮುರಿದು ಕೊಠಡಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ್ದಾರೆ.
ಈ ಉರ್ದು ಶಾಲೆಯ ಪಕ್ಕದಲ್ಲೇ ಉಪ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳು ಇದ್ರೂ ಈ ರೀತಿ ಘಟನೆ ನಡೆದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆ ಅನೈತಿಕ ಚಟುವಟಿಕೆಗೆ ತಾಣವಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೂಡಲೇ ಅನೈತಿಕ ಚಟುವಟಿಕೆಗಳನ್ನ ತಡೆಯಬೇಕು ಎಂದು ಗ್ರಾಮಸ್ಥರು ಪೊಲೀಸರಿಗೆ ಒತ್ತಾಯಿಸಿದ್ದಾರೆ.
drinks party in tumkur urdu school