ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಿಚ್ಚ ಸುದೀಪ ಅವರಿಂದ “ದೃಶ್ಯ 2” ಚಿತ್ರದ ಟ್ರೇಲರ್ ಅನಾವರಣ..!

Namratha Rao by Namratha Rao
November 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕಿಚ್ಚ ಸುದೀಪ ಅವರಿಂದ “ದೃಶ್ಯ 2” ಚಿತ್ರದ ಟ್ರೇಲರ್ ಅನಾವರಣ..!

ಸಖತ್ ಥ್ರಿಲ್ಲಿಂಗ್ ಆಗಿದೆ ‘ದೃಶ್ಯ 2’ ಟ್ರೇಲರ್

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ರವಿಚಂದ್ರನ್ ನಟನೆಯ ಸೂಪರ್ ಹಿಟ್ ದೃಶ್ಯ ಸಿನಿಮಾದ ಸೀಕ್ವೆಲ್ ದೃಶ್ಯ 2 ಶೀಘ್ರವೇ ಬರಲಿದೆ.. ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ತಾಯಿದೆ..

ಅಂದ್ಹಾಗೆ “ದೃಶ್ಯ” ಚಿತ್ರದ ಮುಂದುವರಿದ ಭಾಗ “ದೃಶ್ಯ 2”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿ  ಈ ಸಮಾರಂಭಕ್ಕೆ ಬಂದಿದ್ದು, ನನಗೆ ಖುಷಿಯಾಗಿದೆ. ರವಿ ಅಣ್ಣ ನನ್ನನ್ನು, ನಮ್ಮ ಕುಟುಂಬದವನು ಎಂದದ್ದು ಇನ್ನೂ ಸಂತೋಷ ತಂದಿದೆ. ಈ ಚಿತ್ರ ಮಲೆಯಾಳಂ, ತೆಲುಗು ಭಾಷೆಯಲ್ಲಿ ಬಂದಿದೆ ಅಂದರು. ಆದರೆ ನಾನು‌ ಯಾವ ಭಾಷೆಯಲ್ಲೂ ಈ ಸಿನಿಮಾ  ನೋಡಿಲ್ಲ‌. ಹಾಗಾಗಿ ನನಗೆ ಕಥೆ ಗೊತ್ತಿಲ್ಲ. ನನ್ನ ಹೆಂಡತಿ ಮಲೆಯಾಳಿ. ಅವರು ಮಲೆಯಾಳಂ ಚಿತ್ರ ನೋಡುವಾಗ ನನಗೂ ತೋರಿಸುತ್ತಾರೆ. ನಾನು ಸಬ್ ಟೈಟಲ್ ನೋಡುತ್ತಿರುತ್ತೇನೆ. ಒಳ್ಳೆಯ  ಕಲಾವಿದರು ಹಾಗೂ ಒಳ್ಳೆಯ ತಂತ್ರಜ್ಞರು ಸೇರಿ ಮಾಡಿದಾಗ ಅದು ಒಳ್ಳೆಯ ಸಿನಿಮಾನೇ ಆಗಿರುತ್ತದೆ. ದೃಶ್ಯ ಚಿತ್ರವನ್ನು ಕನ್ನಡದಲ್ಲೇ ನೋಡಿದ್ದೀನಿ. ಎರಡನೇ ಭಾಗವನ್ನು ಕನ್ನಡದಲ್ಲೇ ನೋಡುತ್ತೇನೆ. ನೀವು ಮೂರನೇ ಭಾಗ ಮಾಡುವುದಿದ್ದರೆ ಮೊದಲು ಕನ್ನಡದಲ್ಲೇ ಮಾಡಿ ಎಂದು ಸುದೀಪ್ ಸಲಹೆ ನೀಡಿದರು.

ದೃಶ್ಯ ಮೊದಲ ಭಾಗದ ಸಿನಿಮಾ ಮಾತುಕತೆ ಆರಂಭವಾಗಿದ್ದು, ನಮ್ಮ ಮಾಣಿಕ್ಯ ಚಿತ್ರದ ಚಿತ್ರೀಕರಣ ಸಮಯದಲ್ಲಿ. ನಾನು ರವಿ ಸರ್ ಗೆ ಒಂದು ಚೆನ್ನಾಗಿರುವ ಮಲೆಯಾಳಂ ಕಥೆ ಬಂದಿದೆ ಕೇಳಿ ಅಂತ ಹೇಳಿದೆ. ಅವರು ಮೊದಲು ಕೇಳಲಿಲ್ಲ. ನಂತರ ಕೆಲವು ದಿನಗಳ ನಂತರ ಕಥೆ ಕೇಳಿದರು. ದೃಶ್ಯ ಆರಂಭವಾಯಿತು ಎಂದು  ಸುದೀಪ್ ಆ ದಿನಗಳನ್ನು ನೆನಪಿಸಿಕೊಂಡರು.

ಬಳಿಕ ಮಾತನಾಡಿದ ರವಿಚಂದ್ರನ್ ಅವರು ಸುದೀಪ್ ನನ್ನ ಮಗ. ಆತನನ್ನು ಬರಮಾಡಿಕೊಳ್ಳಲು ನಾನೇ ಮುಖ್ಯದ್ವಾರದ ಬಳಿ ಹೋಗಿದ್ದೆ. ನನ್ನ ಸಮಾರಂಭಕ್ಕೆ ಬರಲು ಸುದೀಪ್ ಗೆ ಕರೆಯಬೇಕೆಂದು ಏನು ಇಲ್ಲ. ಆರ್ಡರ್ ಮಾಡಬಹುದು. ಏಕೆಂದರೆ ಆತ ನನ್ನ ಮಗ. ಸುದೀಪ್ ಸಮಾರಂಭಗಳಿಗೆ ನಾನು ಹಾಗೆ ಹೋಗುತ್ತೇನೆ. ನಮ್ಮಿಬ್ಬರಲ್ಲಿ ಆ ಬಾಂಧವ್ಯವಿದೆ. ಎಂದು ಚಿತ್ರೀಕರಣದ ಕೆಲವು ಅನುಭವಗಳನ್ನು ಹಂಚಿಕೊಂಡರು.

 

ಸಂಗೀತ ನೀಡಿರುವ ಅಜನೀಶ್ ಲೋಕನಾಥ್ ಸಂಗೀತದ ಬಗ್ಗೆ, ಪ್ರಮೋದ್ ಶೆಟ್ಟಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

E4 entertainment ಲಾಂಛನದಲ್ಲಿ ನಿರ್ಮಾಣವಾಗಿದ್ದು, ನಿರ್ಮಾಪಕರಲೊಬ್ಬರಾದ ಮುಖೇಶ್ ಮೆಹ್ತಾ ಮಾತನಾಡಿ ಕನ್ನಡದಲ್ಲಿ ಇದು ನಮ್ಮ ಎರಡನೇ ಚಿತ್ರ. ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್ ಬಿಡುಗಡೆಗೆ ಬಂದಿರುವ ಸುದೀಪ್ ಅವರಿಗೆ ಧನ್ಯವಾದ ಎಂದರು.

ವಿಷಯಗಳನ್ನು ಹಂಚಿಕೊಂಡರು. ಮೊದಲ ಬಾರಿಗೆ ಕನ್ನಡ ಸಿನಿಮಾವೊಂದನ್ನು ಬಿಡುಗಡೆ ಮಾಡುತ್ತಿರುವ ಜೀ ಸಿನಿಮಾಸ್ ನ ನೀರಜ್ ಸಹ ಕೆಲವು ವಿಚಾರಗಳನ್ನ ಹಂಚಿಕೊಂಡ್ರು..

ಮಳಯಾಳಂನಲ್ಲಿ ಮೋಹನ್ ಲಾಲ್ ನಟಿಸಿದ್ದ ದೃಶ್ಯಂ ಸಿನಿಮಾವನ್ನ  ಸೌತ್ ಇಂಡಿಯಾದ ಎಲ್ಲಾ ಭಾಷೆಗಳಲ್ಲೂ ರೀಮೇಕ್ ಮಾಡಲಾಗಿತ್ತು.. ಎಲ್ಲಾ ಬಾಷೆಗಳಲ್ಲೂ ಸಿನಿಮಾ ಸೂಪರ್ ಹಿಟ್ ಆಗಿತ್ತು..

ಅಂತೆಯೇ  2014 ಕನ್ನಡದಲ್ಲಿ ರವಿಚಂದ್ರನ್ ನಟನೆಯ ದೃಶ್ಯ ಸಿನಿಮಾ ರಿಲೀಸ್ ಆಗಿತ್ತು.. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗೆ ಜನ ಜೈಕಾರ ಹಾಕಿದ್ರು.. ಇದೀಗ  ತೆಲುಗು , ಮಳಯಾಳಂನಲ್ಲಿ ದೃಶ್ಯಂ 2 ಬಂದಾಗಿದೆ.. ಆದ್ರೆ ಎರೆಡೂ ಭಾಷೆಗಳಲ್ಲೂ ಈ ಸಿನಿಮಾ ನೇರವಾಗಿ ಒಟಿಟಿಗೆ ಬಮದಿದ್ದವು..  ಇದೀಗ ಕನ್ನಡದಲ್ಲೂ ದೃಶ್ಯ 2 ಬರುತ್ತಿದೆ.. ಆದರೆ ಈ ಸಿನಿಮಾ ಒಟಿಟಿಯಲ್ಲಿ ಬರೋದಿಲ್ಲ , ಥಿಯೇಟರ್ ಗಳಲ್ಲೇ ರಿಲೀಸ್ ಆಗಲಿದೆ.

2014 ರ ‘ದೃಶ್ಯ’ ಸಿನಿಮಾದಲ್ಲಿ ರವಿ ಬೋಪಣ್ಣ ಮುಚ್ಚಿ ಹಾಕಿದ್ದ ಕೊಲೆಯ ರಹಸ್ಯ ಈ ಸಿನಿಮಾದಲ್ಲಿ ತೆರೆದುಕೊಳ್ಳಲಿವೆ ಎಂಬುದನ್ನು ಟ್ರೇಲರ್ ಹೇಳುತ್ತಿದೆ. 2014 ರ ‘ದೃಶ್ಯ’ ಸಿನಿಮಾ ನಿರ್ದೇಶಿಸಿದ್ದ ಪಿ.ವಾಸು ಅವರೇ ‘ದೃಶ್ಯ 2’ ಅನ್ನು ಸಹ ನಿರ್ದೇಶನ ಮಾಡಿದ್ದಾರೆ. ರವಿಚಂದ್ರನ್ ಜೊತೆಗೆ ನವ್ಯಾ ನಾಯರ್, ಮಕ್ಕಳ ಪಾತ್ರದಲ್ಲಿ ಸ್ವರೂಪಿಣಿ ನಾರಾಯಣ್, ಉನ್ನತಿ, ಮೊದಲ ಸಿನಿಮಾದಲ್ಲಿದ್ದ ಸಾಧು ಕೋಕಿಲ, ತಮಿಳಿನ ಪ್ರಭು, ಆಶಾ ಶರತ್ ಇವರುಗಳ ಜೊತೆಗೆ ಮತ್ತೊಂದು ಮುಖ್ಯ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಸಹ ಇರಲಿದ್ದಾರೆ.

Tags: #Ravichandran#saakshatvcinibazaardrishya2kannada filmKICCHA SUDEEPSandalwoodtrailer
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram