ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ..!
ಬಾಗ್ದಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿಯಾಗಿದೆ ಎಂದು ಇರಾಕಿ ಭದ್ರತಾ ಏಜೆನ್ಸಿಗಳು ವರದಿ ಮಾಡಿವೆ. ಬಾಗ್ದಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ವಿಕ್ಟರಿ ಮಿಲಿಟರಿ ನೆಲೆ ಮೇಲೆ ರಾಕೆಟ್ ದಾಳಿಯಾಗಿದೆ ಎಂದು ವರದಿ ಮಾಡಿದೆ.3 ಡ್ರೋನ್ ದಾಳಿಗಳಲ್ಲಿ ಒಂದನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಇದಕ್ಕೂ ಸ್ವಲ್ಪ ಸಮಯದ ಹಿಂದೆಯಷ್ಟೇ ಇರಾಕಿ ಪ್ರಾಂತ್ಯದ ಸಲಾಹ್ ಅದ್ ದಿನ್ ಎಂಬಲ್ಲಿರುವ ಬಾಲಾಡ್ ವಾಯುನೆಲೆ ರಾಕೆಟ್ ದಾಳಿಗೊಳಗಾಗಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ವರೆಗೆ ಯಾರೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದ್ರೆ ಇರಾಕ್ನ ಅಮೆರಿಕ ಸೇನಾ ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.