ರಾಜ್ಯದಲ್ಲಿ ಮುಂಗಾರು ಮಳೆ (Monsoon)ರಾಯ ಸಂಪೂರ್ಣವಾಗಿ ಕೈಕೊಟ್ಟಿದ್ದಾನೆ. ಹೀಗಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ (Govt)ವು ಸದ್ಯ ಬರಗಾಲ ಘೋಷಿಸುತ್ತೇನೆ ಎಂದು ಹೇಳಿದ್ದು, ಇದಕ್ಕಾಗಿ ಸೋಮವಾರ ಸಭೆ ನಡೆಸುತ್ತಿದೆ.
ರಾಜ್ಯದಲ್ಲಿ ಕಳೆದ ಮೂರು ವರ್ಷ ಪ್ರವಾಹ ಉಂಟಾಗಿತ್ತು. ಆದರೆ, ಈ ಬಾರಿ ಮತ್ತೆ ಬರಗಾಲ ಆವರಿಸಿದೆ. ರೈತರಿಗೆ ಸಮರ್ಪಕವಾಗುವಂತೆ ಮಳೆ ಬಾರದೆ, ಆಗಾಗ ಬಂದು ರೈತರ ನಿದ್ದೆಗೆಡಿಸಿದೆ. ರಾಜ್ಯದ ಮುಕ್ಕಾಲು ಭೂಭಾಗದಲ್ಲಿ ಮಳೆ ಇಲ್ಲದೇ ರೈತರು ಕಂಗೆಟ್ಟು ಹೋಗಿದ್ದಾರೆ. ಈಗ ಭೀಕರ ಬರಕ್ಕೆ ತುತ್ತಾಗಿದ್ದು ಪರಿಹಾರಕ್ಕೂ ಪರದಾಡ್ತಿದ್ದಾರೆ.
ಹಲವೆಡೆ ಸಾಲಬಾಧೆಗೆ ರೈತರು ಆತ್ಮಹತ್ಯೆಗಳು ಮತ್ತೆ ಆರಂಭವಾಗಿವೆ. ಹೀಗಾಗಿ ಸರ್ಕಾರ ಎಲ್ಲಾ ತಾಲೂಕುಗಳಲ್ಲಿ ಜಂಟಿ ಸರ್ವೇ ಮಾಡಿದ್ದು ಸೋಮವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸುತ್ತಿದೆ. ಕೃಷ್ಣೆಗೆ ಬಾಗಿನ ಅರ್ಪಿಸಿದ ಬಳಿಕ ಆಲಮಟ್ಟಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದ ಹಲವು ಜಲಾಶಯಗಳು ಭರ್ತಿಯಾಗಿವೆ. ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಈ ಭಾಗದಲ್ಲಿ ನೀರಿನ ಸಮಸ್ಯೆ ಇಲ್ಲ. ಕೃಷ್ಣ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಕಡಿಮೆ ಆಗಿದೆ, ಅದಕ್ಕೆ 113 ತಾಲೂಕುಗಳಲ್ಲಿ ಬರ ಎಂದು ಘೋಷಿಸಲಾಗಿದೆ.
ಯಾವ ಯಾವ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ ಅವುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಘೋಷಣೆಗೆ ಮನವಿ ಸಲ್ಲಿಸಲಾಗುವುದು. ಎನ್ ಡಿ ಆರ್ ಎಫ್ ನಿಯಮ ಬದಲಾವಣೆ ಮಾಡಿಲ್ಲ. ಅದನ್ನು ತಿದ್ದಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಕೋರಿ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.