ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಇರುವುದನ್ನು ನಾನು ನೋಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಇಂದು ಸಂಸದೆ ಸುಮಲತಾ ಅಂಬರೀಶ್ 57ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪತಿ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ಯಾಂಡಲ್‍ವುಡ್, ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲ ಸಿನಿಮಾರಂಗವೂ ಒಂದೇ. ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಇರುವುದನ್ನು ನಾವು ನೋಡಿಲ್ಲ. ಆದರೆ ಇತ್ತೀಚೆಗೆ ಯುವಕರು ಹೆಚ್ಚಾಗಿ ಡ್ರಗ್ ಮಾಫಿಯಾಗೆ ಬಲಿಯಾಗುತ್ತಿದ್ದಾರೆ ಎಂದರು.