ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ನೈಜೀರಿಯನ್ ಪ್ರಜೆ
ಬೆಂಗಳೂರು : ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ ನೈಜೀರಿಯನ್ ಮೂಲದ ಪ್ರಜೆ ಪೊಲೀಸರಿಂದ ಎಸ್ಕೇಪ್ ಆಗುವ ಯತ್ನದಲ್ಲಿ ಮೃತಪಟ್ಟಿದ್ದಾನೆ. ಈ ಘಟನೆ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಬಳಿ ನಡೆದಿದೆ.
ಪೀಟರ್ ಎಂಬಾತ ಮೃತ ನೈಜೀರಿಯಾ ಪ್ರಜೆಯಾಗಿದ್ದಾನೆ. ಈತ ಡ್ರಗ್ ಪೆಡ್ಲಿಂಗ್ ಪ್ರಕರಣದ ಆರೋಪಿಯಾಗಿದ್ದ. ಈತನ ಸುಳಿವು ಸಿಕ್ಕ ತಕ್ಷಣ ರಾಮಮೂರ್ತಿ ನಗರ ಠಾಣಾ ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಕಲ್ಕೆರೆಗೆ ಜಿಗಿದಿದ್ದಾನೆ. ಈ ವೇಳೆ ಕೆರೆ ಬದಿಯ ಗಟ್ಟಿಯಾದ ಕಟ್ಟೆ ತಗುಲಿ ಪ್ರಜ್ಞೆ ತಪ್ಪಿದ್ದ. ತಕ್ಷಣ ಪೊಲೀಸರು ಆತನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








