ದಕ್ಷಿಣ ಕನ್ನಡ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಎಂಡಿಎಂಎ(MDMA) ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಿಜೈ ನಿವಾಸಿ ಮೊಹಮ್ಮದ್ ಅಮೀನ್ ರಾಫಿ (23), ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22), ಉಳ್ಳಾಲ ಬೋಳಿಯಾರ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತ ಆರೋಪಿಗಳು ಎನ್ನಲಾಗಿದೆ.
ಬಂಧಿತರಿಂದ 6.5 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.