ಡ್ರಗ್ಸ್ ದಂಧೆ : ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅರೆಸ್ಟ್
ಕೋಲ್ಕತ್ತಾ : ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅವರನ್ನು ಪೊಲೀಸರು ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿಯಲ್ಲಿ ಬಂಧಿಸಿದ್ದಾರೆ.
ಕೋಕೇನ್ ಸಾಗಿಸುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಅವರನ್ನು ಬಂಧಿಸಲಾಗಿತ್ತು.
ವಿಚಾರಣೆ ವೇಳೆ ಪಮೇಲಾ ಗೋಸ್ವಾಮಿ ಅವರು ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು.
ಈ ಹಿನ್ನೆಲೆ ರಾಕೇಶ್ ಸಿಂಗ್ ಗಾಗಿ ಪೊಲೀಸರು ಹುಡುಕಾಟ ನಡೆಸಿ ಕೋಲ್ಕತ್ತಾ ಪೊಲೀಸರು ನೀಡಿದ ಮಾಹಿತಿಗೆ ಅನುಸಾರವಾಗಿ ಗಲ್ಸಿ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾದಲ್ಲಿ ರಾಕೇಶ್ ಸಿಂಗ್ ನನ್ನು ಬಂಧಿಸಲಾಗಿದೆ.
ಇತ್ತ ಬಂದರು ಪ್ರದೇಶದಲ್ಲಿರುವ ಬಿಜೆಪಿ ರಾಜ್ಯ ಸಮಿತಿ ಮುಖಂಡನ ಮನೆ ಪ್ರವೇಶಿಸದಂತೆ ಸಿಬ್ಬಂದಿಯನ್ನು ರಾಕೇಶ್ ಸಿಂಗ್ ಪುತ್ರರು ತಡೆದಿದ್ದು, ಅವರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎನ್ನುವ ಬಗ್ಗೆ ವಿಚಾರಣೆಗೆ ಪೊಲೀಸರು ನೋಟೀಸ್ ನೀಡಿದ್ದನ್ನು ಪ್ರಶ್ನಿಸಿ ರಾಕೇಶ್ ಸಿಂಗ್ ಕೋಲ್ಕತ್ತಾ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಆ ಅರ್ಜಿ ವಜಾ ಆಗಿತ್ತು.
