ಡ್ರಗ್ಸ್ ಪ್ರಕರಣ | ಸಂಜನಾ ಮತ್ತು ರಾಗಿಣಿಗೆ ಮತ್ತೆ ಸಂಕಷ್ಟ
ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಇದೀಗ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸದ್ಯ ಜಾಮೀನಿನ ಮೇಲೆ ಹೊರಗಿರುವ ನಟಿಯರಿಬ್ಬರೂ ಡ್ರಗ್ಸ್ ಸೇವನೆ ಮಾಡಿರೋದು ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ.
ಇಬ್ಬರು ನಟಿಯರು ಡ್ರಗ್ಸ್ ಸೇವನೆ ಮಾಡಿರೋದಾಗಿ ಹೈದರಾಬಾದ್ ನ ಸಿಎಸ್ ಎಫ್‍ಎಲ್‍ನ ಲ್ಯಾಬ್ ವರದಿ ನೀಡಿದ್ದು, ಇದನ್ನು ಸಿಸಿಬಿ ತರಿಸಿಕೊಂಡಿದೆ.
ಈ ಹಿಂದೆ ಇಬ್ಬರು ನಟಿಯರನ್ನು ಬಂಧಿಸಿದ್ದಾಗ ತಲೆ ಕೂದಲು ಸಂಗ್ರಹಿಸಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಳುಹಿಸಲಾಗಿತ್ತು.
ಇದೀಗ ಈ ವರದಿ ಬಂದಿದ್ದು, ಇಬ್ಬರೂ ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ ಎಂದು ತಿಳಿದುಬಂದಿದೆ.









