ಡ್ರಗ್ಸ್ ಪ್ರಕರಣ : ಬಂಧನದ ಭೀತಿಯಲ್ಲಿ ಶಾರೂಖ್ ಪುತ್ರ Shah Rukh saaksha tv
ಮುಂಬೈ : ಡ್ರಗ್ಸ್ ಪ್ರರಕಣದಲ್ಲಿ ಎಸ್ ಸಿಬಿ ಬಲೆಗೆ ಸಿಲುಕಿಕೊಂಡಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಗೆ ಇದೀಗ ಬಂಧನದ ಭೀತಿ ಎದುರಾಗಿದೆ.
ಸದ್ಯ ಆರ್ಯನ್ ಎನ್ ಸಿಬಿ ಅಧಿಕಾರಿಗಳ ವಶದಲ್ಲಿದ್ದು, ಅವರ ಮೊಬೈಲ್ ಅನ್ನು ಅಧಿಕಾರಿಗಳು ಸ್ಕ್ಯಾನ್ ಮಾಡುತ್ತಿದ್ದಾರೆ ಮತ್ತು ಫೋನ್ ಚಾಟ್ ಲಿಸ್ಟ್ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಮಧ್ಯೆ ಆರ್ಯನ್ ಡ್ರಗ್ಸ್ ಸೇವನೆ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಲು ರಕ್ತ ಪರೀಕ್ಷೆ ನಡೆಸಲು ಸಿದ್ಧತೆ ಸಹ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಡ್ರಗ್ಸ್ ಕೇಸ್ ನಲ್ಲಿ ಶಾರೂಖ್ ಖಾನ್ ಪುತ್ರನಿಗೆ ಬಂಧನ ಭೀತಿ ಎದುರಾಗಿದೆ.
ಶನಿವಾರ ಮುಂಬೈ ಸಮುದ್ರದ ಮಧ್ಯದಲ್ಲಿ ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಇದರ ಖಚಿತ ಮಾಹಿತಿ ತಿಳಿದ ಎನ್‌ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಪಾರ್ಟಿಯಲ್ಲಿದ್ದ ಶಾರೂಖ್ ಪುತ್ರ ಸೇರಿ ಒಟ್ಟು 10 ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೊಕೇನ್, ಎಂಡಿಎA, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.









