ಡ್ರಗ್ಸ್ ಪ್ರಕರಣ : ನಟ ಅರ್ಜುನ್ ರಾಂಪಾಲ್ ಗೆ ಸಮನ್ಸ್
ಮುಂಬೈ : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಟ್ ನಟ ಅರ್ಜುನ್ ರಾಂಪಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಸಮನ್ಸ್ ನೀಡಿದೆ. ಸಮನ್ಸ್ ನಲ್ಲಿ ಎನ್ ಸಿನಿ ನವೆಂಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡ್ರಗ್ಸ್ ಸಪ್ಲೈ ಮಾಡುತ್ತಿರುವ ಆರೋಪದ ಮೇಲೆ ಕೆಲ ದಿನಗಳಿಂದೆ ಅರ್ಜುನ್ ರಾಂಪಾಲ್ ಪತ್ನಿ ಸೋದರ ಅಗಿಸಿಲಾಓಸ್ ನನ್ನು ಪುಣೆಯ ಲೋನಾವಾಲಾ ಬಳಿ ಬಂಧಿಸಲಾಗಿತ್ತು.
ಮೃತ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಶೌವಿಕ್ ಜೊತೆ ಅಗಿಸಿಲಾಓಸ್ ನಿರಂತರ ಸಂಪರ್ಕದಲ್ಲಿದ್ದ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದರ ಮುಂದುವರಿದ ಭಾಗವಾಗಿ ನವೆಂಬರ್ 9ರಂದು ನಟ ಅರ್ಜುನ್ ರಾಂಪಾಲ್ ಅವರ ಮುಂಬೈನ ಬಾಂದ್ರಾ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದರು.
ಪಬ್ ಜಿ ಪ್ರಿಯರಿಗೆ ಗುಡ್ ನ್ಯೂಸ್ ಇಲ್ಲಿದೆ..
ಈ ವೇಳೆ ನಿಷೇಧಿತ ಮಾತ್ರೆಗಳು (ಡ್ರಗ್ಸ್) ಲಭ್ಯವಾಗಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಸಿಕ್ಕ ವಸ್ತುಗಳ ಬಗ್ಗೆ ಅರ್ಜುನ್ ರಾಂಪಾಲ್ ಮತ್ತು ಗೆಬ್ರಿಯೆಲಾ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸುತ್ತಿದೆ.
ಇನ್ನು ದಾಳಿ ವೇಳೆ ಮೊಬೈಲ್ ಮತ್ತು ಲ್ಯಾಪ್ ಟಾಪ್ ಸಹ ವಶಕ್ಕೆ ಪಡೆಯಲಾಗಿದೆ
ಬುಧವಾರ ಎನ್‍ಸಿಬಿ ಅಧಿಕಾರಿಗಳ ಮುಂದೆ ರಾಂಪಾಲ್ ಗೆಳತಿ ಗ್ಯಾಬ್ರಿಯೆಲಾ ಹಾಜರಾಗಿದ್ದರು. ಇಂದು ಸಹ ಮತ್ತೆ ಗ್ಯಾಬ್ರಿಯೆಲಾರನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಡೆವಲಪರ್ ಮತ್ತು ಮನೆ ಖರೀದಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸೀತಾರಾಮನ್..!
ಇದೀಗ ನಟ ಅರ್ಜುನ್ ರಾಂಪಾಲ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
.Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel