ಅಂತರಾಜ್ಯ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು: ಅಂತರ್ ರಾಜ್ಯ ಗಾಂಜಾ (Drug) ಸರಬುರಾಜು ಮಾಡುತ್ತಿದ್ದ ಆರೋಪಿಯನ್ನು ಕುಮಾರಸ್ವಾಮಿ (Kumarswamy) ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಆದೀಲ್ ಹಮೀದ್ ಶೇಕ್ ಬಂಧಿತ ಆರೋಪಿ. ಈತನು ಹೊರ ರಾಜ್ಯಗಳಿಂದ ಗಾಂಜಾ ತಂದು ಸ್ಥಳೀಯವಾಗಿ ಮಾರಾಟ ಮಾಡುತ್ತಿದ್ದನು. ಈತನಿಂದ 12 ಲಕ್ಷ ಮೌಲ್ಯದ 40 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಕುಮಾರಸ್ವಾಮಿಲೇಔಟ್ನ ಕೆಂಪೇಗೌಡ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಾಲೇಜು ಮತ್ತು ಯುವಕ-ಯುವತಿಯರನ್ನು ಟಾರ್ಗೆಟ್ ಮಾಡಿಕೊಂಡು ಈ ಗಾಂಜಾ ಮಾರಾಟ ಮಾಡುತ್ತಿದ್ದ.
ಈ ಹಿಂದೆ ಕೆಲವು ಸ್ಥಳೀಯ ಗಾಂಜಾ ವ್ಯಾಪಾರಿಗಳಿಗೆ ಮಾರಾಟ ಮಾಡಿರುವುದಾಗಿ ಆರೋಪಿ ಬಾಯಿ ಬಿಟ್ಟಿದ್ದಾನೆ.