ಡ್ರಗ್ಸ್ ಮಾಫಿಯಾ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸಿಸಿಬಿ ವಶಕ್ಕೆ
( Drugs mafia Ricky Rai son of Muthappa Rai )
ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.( Drugs mafia – Ricky Rai son of Muthappa Rai )
ಡ್ರಗ್ಸ್ ಕೇಸ್ ನಲ್ಲಿ ಮುತ್ತಪ್ಪ ರೈ ಪುತ್ರ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ರಾಮನಗರ ಬಿಡದಿಯ ಮನೆಯ ಮೇಲೆ ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿತ್ತು. ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಜೊತೆ ರಿಕ್ಕಿ ರೈ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.
ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.