ಭಾರತ ಸೇರಿ ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿದ ದುಬೈ
ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಕೈಗೊಂಡಿದ್ದ ದುಬೈ ಸರ್ಕಾರ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಪ್ರಯಾಣಿಕರ ಮೇಲೆ ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ವಿಧಿಸಿತ್ತು.. ಇದೀಗ ಕೋವಿಡ್ ಅಲೆ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಇದೀಗ ದುಬೈ ಸರ್ಕಾರ ಸಡಿಲಗೊಳಿಸಿದೆ.
UAE ಅನುಮೋದಿತ ಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದವರು ಭಾರತ ಸೇರಿದಂತೆ ಕೆಲವು ದೇಶಗಳ ನಿವಾಸಿಗಳು ದುಬೈಗೆ ಪ್ರಯಾಣಿಸಬಹುದು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಶೇಖ್ ಮನ್ಸೂರ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಾಕ್ತೌಮ್ ನೇತೃತ್ವದ ಸಮಿತಿಯು ಈ ನಿರ್ಧಾರ ತೆಗೆದುಕೊಂಡಿದೆ. ಜೂನ್ 23ರಿಂದ ದಕ್ಷಿಣ ಆಫ್ರಿಕಾ, ನೈಜೀರಿಯಾ ಮತ್ತು ಭಾರತದಿಂದ ಬರುವ ಪ್ರಯಾಣಿಕರಿಗಾಗಿ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.
ಸಿನೊಫಾರ್ಮ್, ಫಿಜರ್-ಬಯೋಟೆಕ್, ಸ್ಪುಟ್ನಿಕ್ ವಿ ಮತ್ತು ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಗಳನ್ನು ಯುಎಇ ಸರ್ಕಾರ ಅನುಮೋದಿಸಿದೆ. ಪ್ರಯಾಣಿಕರು ನಿರ್ಗಮನಕ್ಕೆ 48 ಗಂಟೆಗಳ ಮೊದಲು ತೆಗೆದುಕೊಂಡ ಆರ್‌ಟಿ–ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತೋರಿಸಬೇಕು ಎಂದು ಹೇಳಲಾಗಿದೆ.
ದೇಶದಲ್ಲಿ ಒಟ್ಟು 29 ಕೋಟಿ ಡೋಸ್ ಲಸಿಕೆ ಪೂರೈಕೆ
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 58,419 ಕೇಸ್ ಪತ್ತೆ








