ಮಂಡ್ಯ: ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ (ಬೆಂಗಳೂರು), ಭಾರತೀಯ ರೆಡ್ ಕ್ರಾಸ್ ಸಂಸ್ಥೆ (ಮಂಡ್ಯ) ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಾಗಮಂಗಲ ತಾಲೂಕಿನ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಈ ಮಹತ್ವದ ಶಿಬಿರದಲ್ಲಿ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ದರ್ಶನ್ ಪುಟ್ಟಣ್ಣಯ್ಯ ಅವರು ಪಾಲ್ಗೊಂಡು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಮಂಡ್ಯ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಬೃಹತ್ ಶಿಬಿರದ ಯಶಸ್ಸಿಗೆ ಕಾರಣರಾದ ಆದಿಚುಂಚನಗಿರಿ ಮಠದ ಪೂಜ್ಯ ಶ್ರೀಗಳು, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಕಿದ್ವಾಯಿ, ಬಿಜಿಎಸ್, ಮಿಮ್ಸ್ ಆಸ್ಪತ್ರೆಯ ವೈದ್ಯರ ತಂಡ, ವೈದ್ಯಕೀಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಹಗಲಿರುಳು ಶ್ರಮಿಸಿದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದರು.
ಈ ರೀತಿಯ ಆರೋಗ್ಯ ಶಿಬಿರಗಳನ್ನು ಆದಷ್ಟು ಶೀಘ್ರವಾಗಿ ಮೇಲುಕೋಟೆಯ ವಿವಿಧ ಗ್ರಾಮಗಳಲ್ಲಿಯೂ ಆಯೋಜಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಶಿಬಿರದ ಪ್ರಮುಖ ವಿಶೇಷತೆಗಳು ಮತ್ತು ಆಡಳಿತಾತ್ಮಕ ವಿವರಗಳು:
ಬೃಹತ್ ವೈದ್ಯಕೀಯ ತಂಡ ಮತ್ತು ಸೌಲಭ್ಯಗಳು: ಸುಮಾರು 250 ಕ್ಕೂ ಹೆಚ್ಚು ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಸೇರಿ ರೋಗಿಗಳ ತಪಾಸಣೆಗೆ ಸನ್ನದ್ಧರಾಗಿದ್ದರು. ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗಳಿಂದ ಅತ್ಯಾಧುನಿಕ ಉಪಕರಣಗಳನ್ನು ತರಿಸಲಾಗಿತ್ತು.
ವೈವಿಧ್ಯಮಯ ತಪಾಸಣೆ: ಹೃದ್ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್, ಸ್ತ್ರೀ ರೋಗಗಳು, ಕೀಲುಮೂಳೆ, ಕಣ್ಣು, ಮೂಗು, ಗಂಟಲು ಹಾಗೂ ಹಲ್ಲಿನ ರೋಗಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ ನಡೆಯಿತು. ಈಗಾಗಲೇ ಎರಡು ಸಾವಿರಕ್ಕೂ ಅಧಿಕ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗಿದೆ.
ಉಚಿತ ಸಾರಿಗೆ ಹಾಗೂ ಚಿಕಿತ್ಸಾ ವ್ಯವಸ್ಥೆ: ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಪಂಚಾಯಿತಿಯಿಂದಲೂ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. 5,000ಕ್ಕೂ ಹೆಚ್ಚು ಜನರು ನೋಂದಣಿ ಮಾಡಿಕೊಂಡು ತಪಾಸಣೆ ಪಡೆದರು. ಆಕಸ್ಮಿಕವಾಗಿ ಶಸ್ತ್ರಚಿಕಿತ್ಸೆ (ಸರ್ಜರಿ) ಮಾಡಬೇಕಿದ್ದವರ ಮಾಹಿತಿ ಪಡೆದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕಿದ್ವಾಯಿ/ಮಿಮ್ಸ್ ಸಹಯೋಗದೊಂದಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ಆಗಮಿಸಿದ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಲ್ಪಿಸಲಾಗಿತ್ತು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ತೀವ್ರತರವಾದ ಕಾಯಿಲೆಯಿಂದ ಬಳಲುತ್ತಿದ್ದು, ತುಂಬಾ ಬಡವರಾಗಿರುವವರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಿಕೊಡುವ ಮತ್ತು ಅವರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಂತಹವರನ್ನು ಪಟ್ಟಿ ಮಾಡಿ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.
ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬೆಟ್ಟಸ್ವಾಮಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಜವರೇಗೌಡ, ಡಾ.ಬೀರಪ್ಪ, ಬೆಟ್ಟೇಗೌಡ, ಸುಚೇಂದ್ರಪ್ರಸಾದ್, ಪ್ರಾಂಶುಪಾಲೆ ವೀಣಾ, ಜವರೇಗೌಡಮಾರಿ ಚಿನ್ನೇಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ
ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ ಸಖಿಯರು) ಒಟ್ಟು 120 ಮಂದಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ...








