ಓಮಿಕ್ರಾನ್ ಆತಂಕ – ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ
ಕೋವಿಡ್ -19 ರ ಓಮಿಕ್ರಾನ್ ರೂಪಾಂತರದ ಹರಡುವಿಕೆ ಹೆಚ್ಚುತ್ತಿರುವ ಆತಂಕದ ಕಾರಣ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಕರ್ಫ್ಯೂ ಜೊತೆಗೆ, ಇತರ ಕೋವಿಡ್-ಸಂಬಂಧಿತ ಪ್ರೋಟೋಕಾಲ್‌ಗಳು ಮತ್ತು ನಿರ್ಬಂಧಗಳು ಸಹ ಜಾರಿಗೆ ಬರುತ್ತವೆ, ಇದರಲ್ಲಿ 200 ಕ್ಕೂ ಹೆಚ್ಚು ಜನರು ಸೇರಿ ಸಭೆ ಸಮಾರಂದಲ್ಲಿ ಪಾಲ್ಗೊಳ್ಳುವುದನ್ನೂ ನಿಷೇಧಿಸಲಾಗಿದೆ.
“ಮಾಸ್ಕ್ ನಹಿ, ತೋ ಸಮನ್ ನಹಿ”. ಮಾಸ್ಕ್ ಧರಿಸದ ಜನರಿಗೆ ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಸಂದೇಶವನ್ನು ಹರಡಲು ಮಾರುಕಟ್ಟೆ ಸ್ಥಳಗಳಲ್ಲಿ ವಿಶೇಷ ಡ್ರೈವ್ ಅನ್ನು ಸರ್ಕಾರ ಆದೇಶಿಸಿದೆ. ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನ ಪರಿಗಣಿಸಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಸರ್ಕಾರದ ವಕ್ತಾರರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 49 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪ್ರಸ್ತುತ 266 ಸಕ್ರಿಯ ಪ್ರಕರಣಗಳಿವೆ.
ಕುತ್ತಿಗೆ ಪಟ್ಟಿ ಹಿಡಿದು ಫುಡ್ ಡಿಲೆವರಿ ಬಾಯ್ ನ ಹೊರದಬ್ಬಿದ ಮಹಿಳೆ…








