ಕನ್ನಡ ಬಾವುಟ ಸುಟ್ಟವರ ವಿರುದ್ಧ ಗಣೇಶ್ , ದುನಿಯಾ ವಿಜಯ್ ಆಕ್ರೋಶ
ಇತ್ತೀಚೆಗೆ MES ಪುಂಡರು ಪ್ರತಿಭಟನಾ ರ್ಯಾಲಿಯಲ್ಲಿ ಉದ್ಧಟತನ ಮೆರೆದಿದ್ದರು.. ನಮ್ಮ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದೂ ಅಲ್ಲದೇ , ಕನ್ನಡ ಪರ ಹೋರಾಟಗಾರರ ವಿರುದ್ಧವೇ ಕೊಲೆ ಯತ್ನದ ದೂರು ದಾಖಲಿಸಿ ಕಿಡಿಗೇಡಿತನ ಪ್ರದರ್ಶಿಸಿದ್ದರು..
ಕನ್ನಡದ ಪರ ಹೋರಾಟಗಾರರು ಎಂಇಎಸ್ ಮುಖಂಡ ದೀಪಕ್ ದಳವಿಗೆ ಡಿಸೆಂಬರ್ 13 ರಂದು ಘೇರಾವ್ ಹಾಕಿ ಮುಖಕ್ಕೆ ಮಸಿ ಬಳಿದರು. ಇದನ್ನು ಖಂಡಿಸಿ ಎಂಇಎಸ್ನವರು ಪ್ರತಿಭಟನಾ ರ್ಯಾಲಿ ಮಾಡಿ ತಿಲಕ್ವಾಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಿಸಿದರು. ಪೊಲೀಸರು ದೂರು ದಾಖಲಿಸಿ, ಕನ್ನಡಪರ ಹೋರಾಟಗಾರ ಸಂಪತ್ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡಿಗರು ನಿಗಿ ನಿಗಿ ಕೆಂಡಕಾರುತ್ತಿದ್ದಾರೆ.. ಈ ಪುಂಡರ ಪುಂಡಾಟ ಹಾಗೂ ಕನ್ನಡ ಪರ ಹೋರಾಟಗಾರರನ್ನ ಬಂಧಿಸಿದ ವಿರುದ್ಧ ಕನ್ನಡಿಗರು ಹಾಗೂ ಕನ್ನಡ ಸಿನಿಮಾರಂಗದ ತಾರೆಯರು ಸಿಡಿದೆದ್ದಿದ್ದಾರೆ..
ಅವರು ಸುಟ್ಟಿದ್ದು ಧ್ವಜವಲ್ಲ,
ಕನ್ನಡಿಗರ ಸ್ವಾಭಿಮಾನದ ಕಿಚ್ಚು.
ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು.
ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು @CMofKarnatakaಜೈ ಕನ್ನಡಾಂಬೆ!! pic.twitter.com/YsITVrhQwe
— Ganesh (@Official_Ganesh) December 16, 2021
ಕನ್ನಡ ಸಿನಿಮಾ ತಾರೆಯರು ಈಗ ಪ್ರಕರಣದ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.. ನವರಸ ನಾಯಕ ಜಗ್ಗೇಶ್ , ಶಿವರಾಜ್ ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು ಕಿಡಿಕಾರುತ್ತಿದ್ದಾರೆ.. ಸೋಷಿಯಲ್ ಮೀಡಿಯಾ ಮೂಲಕ ಕನ್ನಡ ಸಿನಿಮಾರಂಗ ತಾರೆಯರು ಆಕ್ರೋಶ ಹೊರಹಾಕ್ತಿದ್ದಾರೆ..
ಅಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂಇಎಸ್ ಚೇಲಾಗಳು , ‘ಈಗ ಕನ್ನಡ ಧ್ವಜಕ್ಕೆ ಬೆಂಕಿ ಇಡಲಾಗಿದೆ, ಮುಂದೆ ಕನ್ನಡಿಗರ ಮನೆಗೆ ಬೆಂಕಿ ಇಡುತ್ತೇವೆ’ಎಂದು ಹೇಡಿತತನದ ಮಾತುಗಳನ್ನಾಡಿದ್ದರು. ಇದೇ ವಿಚಾರ ಈಗ ಕನ್ನಡಿಗರ ಮನಸಲ್ಲಿ ಬೆಂಕಿ ಹೊತ್ತಿಸಿದೆ..
ಕನ್ನಡ ಧ್ವಜ ಸುಟ್ಟವರ ವಿರುದ್ಧ ಆಕ್ರೋಶ ಹೊರ ಹಾಕಿದ ನಟ ಗಣೇಶ್, ‘ಅವರು ಸುಟ್ಟಿದ್ದು ಧ್ವಜವಲ್ಲ, ಕನ್ನಡಿಗರ ಸ್ವಾಭಿಮಾನದ ಕಿಚ್ಚು. ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ಜೈ ಕನ್ನಡಾಂಬೆ’ ಎಂದು ಗಣೇಶ್ ಆಕ್ರೋಶ ಹೊರಹಾಕಿದ್ದಾರೆ.
ದುನಿಯಾ ವಿಜಯ್ ಕೂಡ ಈ ಘಟನೆಯನ್ನ ತೀವ್ರವಾಗಿ ಖಂಡಿಸಿ ಟ್ವೀಟ್ ಮಾಡಿದ್ದು, ‘ನಾಡು, ನುಡಿ, ಭಾಷೆ ನಮ್ಮ ಉಸಿರಾಟದ ಒಂದು ಭಾಗ. ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ’ ಎಂದು ಬರೆದುಕೊಂಡಿದ್ದಾರೆ..
ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ. pic.twitter.com/6K5IxYW3J9
— Duniya Vijay (@OfficialViji) December 16, 2021