ನಟ ದುನಿಯಾ ವಿಜಯ್ ತಂದೆ ನಿಧನ
ಬೆಂಗಳೂರು : ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ (81) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ದಿನದ ಹಿಂದೆ ದುನಿಯಾ ವಿಜಯ್, ಅಪ್ಪನನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಇಂದು ಬೆಳಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ರುದ್ರಪ್ಪ ಮೃತಪಟ್ಟಿದ್ದಾರೆ.
ಈ ಸಂಬಂಧ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ತಂದೆಯ ಫೋಟೋ ಹಾಕಿ ಮಿಸ್ ಯೂ ಅಪ್ಪ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಜುಲೈನಲ್ಲಿ ವಿಜಯ್ ರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಡೆದಿತ್ತು.