ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಾಯಿ ಆರೋಗ್ಯದಲ್ಲಿ ಏರು ಪೇರು
ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗ್ತಿದೆ.. ವಿಜಿ ಅವರ ನಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ.. ಹೀಗಾಗಿ ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇದೀಗ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರೋ ದುನಿಯಾ ವಿಜಯ್ ತಮ್ಮ ತಾಯಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನೇ ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದಿದ್ಧಾರೆ.