K L Rahul ತಂಡಕ್ಕೆ ಗುಡ್ ನ್ಯೂಸ್…
ಐಪಿಎಲ್‌ನ ಹೊಸ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಶುಭ ಸುದ್ದಿ ಬಂದಿದೆ. ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದ ಚಮೀರಾ ಚೇತರಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಐಪಿಎಲ್ ಆರಂಭದಿಂದಲೇ ಲಕ್ನೋ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಚಮೀರಾ ಅವರನ್ನ ರೂ. 2 ಕೋಟಿಗೆ ಖರೀದಿಸಿದೆ.
ಚಮೀರಾ ಕಳೆದ ವರ್ಷ ಆರ್‌ಸಿಬಿಯನ್ನು ಪ್ರತಿನಿಧಿಸಿದ್ದರು.
ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಗಾಯದ ಸಮಸ್ಯೆಯಿಂದ ಐಪಿಎಲ್‌ನಿಂದ ಹೊರಗುಳಿದಿದ್ದಾರೆ.
ಮೆಗಾ ಹರಾಜಿನಲ್ಲಿ ಲಕ್ನೋ ಮಾರ್ಕ್ ವುಡ್ ಅವರನ್ನು 7.50 ಕೋಟಿ ರೂಪಾಯಿಗೆ ಖರೀದಿಸಿತ್ತು.
ಇನ್ನು ಈ ಬಾರಿಯ IPL-2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ.
ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮಾರ್ಚ್ 28 ರಂದು ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ.
Dushmantha Chameera regains fitness ahead of the season









