ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಕೆ : ಸದಾನಂದ ಗೌಡ
ಬೆಂಗಳೂರು : ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ.
ಜಿಎಸ್ ಟಿ ವ್ಯಾಪ್ತಿಯಲ್ಲಿ ಇದನ್ನು ತಂದರೆ ಒಳ್ಳೆಯದು ಎಂದು ಪೆಟ್ರೋಲ್ ದರ ಏರಿಕೆ ವಿಚಾರವಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಗೃಹ ಕಚೇರಿಯಲ್ಲಿ ನ್ಯಾನೋ ಉರಿಯಾ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ.
ಜಿಎಸ್ ಟಿ ವ್ಯಾಪ್ತಿಯಲ್ಲಿ ಇದನ್ನು ತಂದರೆ ಒಳ್ಳೆಯದು. ಜಿಎಸ್ ಟಿ ಅಟೋನಮಸ್ ಬಾಡಿ ಆಗಿದೆ. ಅದು ನಮ್ಮ ನಿಯಂತ್ರಣದಲ್ಲಿ ಇಲ್ಲ.
ಎಲ್ಲ ವಿತ್ತ ಸಚಿವರು ಇರುತ್ತಾರೆ. ಅಲ್ಲಿ ಇದರ ದರ ನಿಗದಿಯಾಗಲಿದೆ ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಉಸ್ತುವಾರಿ ಇರ್ತಾರೆ.
ಕೇಂದ್ರದ ವರಿಷ್ಠರು ನೀಡಿದ ಮಾಹಿತಿಯನ್ನು ರಾಜ್ಯಗಳಿಗೆ ನೀಡ್ತಾರೆ. ಹಾಗೆಯೇ ಅರುಣ್ ಸಿಂಗ್ ಕೂಡ ಮಾಡಿದ್ದಾರೆ.
ಮುಂದಿನ ಎರಡು ವರ್ಷಗಳು ಕೂಡ ಬಿಎಸ್ ವೈ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ ಎಂದರು.