ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ‘ರಾಕ್ಷಸ’ ಚಿತ್ರ ಶಿವರಾತ್ರಿಯಂದು ತೆರೆಗೆ ಬರುತ್ತಿದೆ. ಮಮ್ಮಿ ಮತ್ತು ದೇವಕಿ ಚಿತ್ರದ ಖ್ಯಾತಿಯ ಲೋಹಿತ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಭಾವನಾತ್ಮಕ ಕಥೆ ಮತ್ತು ಟೈಮ್ ಲೂಪ್ ಕಾನ್ಸೆಪ್ಟ್ ಹೊಸ ಆಯಾಮವನ್ನು ಸೇರಿಸಿವೆ.
ಚಿತ್ರದ ಟೈಟಲ್ ಕೇಳಿದ ತಕ್ಷಣ ಇದು ಹಾರರ್ ಕಥೆ ಎಂಬ ಭಾವನೆ ಮೂಡಬಹುದು. ಆದರೆ ‘ರಾಕ್ಷಸ’ ಕೇವಲ ಭಯಾನಕ ಕಥೆಯಲ್ಲ. ಭಾವನಾತ್ಮಕ ಕಥೆಯನ್ನು ಟೈಮ್ ಲೂಪ್ ಕಾನ್ಸೆಪ್ಟ್ನೊಂದಿಗೆ ಒಗ್ಗೂಡಿಸುವ ಮೂಲಕ ಚಿತ್ರ ವಿಭಿನ್ನತೆಯನ್ನು ಹೊಂದಿದೆ.
ಪ್ರಜ್ವಲ್ ದೇವರಾಜ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರದಲ್ಲಿ ಶೋಭಾರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ್ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಈ ಚಿತ್ರದಲ್ಲಿ 80% ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿದ್ದು, ಉಳಿದ ಭಾಗಗಳು ರಾಮೇಶ್ವರಂ, ಗೋವಾ, ಮತ್ತು ಬೆಂಗಳೂರುನಲ್ಲಿ ಚಿತ್ರೀಕರಿಸಲಾಗಿದೆ.
ಶಾನ್ವಿ ಎಂಟರ್ಟೈನ್ವೆಂಟ್ ನಡಿ ದೀಪು ಬಿ.ಎಸ್ ನಿರ್ಮಾಣ ಮಾಡುತ್ತಿದ್ದು, ನವೀನ್ ಹಾಗೂ ಮಾನಸ ಕೆ ಸಹ ನಿರ್ಮಾಣ ಮಾಡಿದ್ದಾರೆ. ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ, ವರುಣ್ ಉನ್ನಿ ಸಂಗೀತ ನಿರ್ದೇಶಕ, ಅವಿನಾಶ್ ಬಸುತ್ಕರ್ ಹಿನ್ನಲೆ ಸಂಗೀತ, ರವಿಚಂದ್ರನ್ ಸಿ ಸಂಕಲನ ರಾಕ್ಷಸ ಸಿನಿಮಾಕ್ಕಿದೆ.
36ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಪ್ರಜ್ವಲ್ ದೇವರಾಜ್ ‘ರಾಕ್ಷಸ’ ಮೂಲಕ ಹೊಸ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾತ್ರಿ ರಿಲೀಸ್ ಆಗಲಿರುವ ಈ ಚಿತ್ರ ಪ್ರೇಕ್ಷಕರಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ.








