ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಗೆ ಮೊದಲ ದಿನವೇ ಮೂರು ನಾಪತ್ರಗಳು ಸಲ್ಲಿಕೆಯಾಗಿವೆ.
ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ್ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ್ ಗುಡಗೇರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಚುನಾವಣೆಗೆ ಅ. 25ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.