ಮುಂಬಯಿ: ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಜನ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ (Maharashtra) ಗ್ಲೌಸ್ ಕಾರ್ಖಾನೆಯೊಂದರಲ್ಲಿಯೇ ಈ ಘಟನೆ ನಡೆದಿದೆ. ಬೆಳಗಿನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕಾರ್ಖಾನೆ ಒಳಗೆ ಸಿಲುಕಿದ್ದ 6 ಜನ ಸಾವನ್ನಪ್ಪಿದ್ದಾರೆ. ಕೂಡಲೇ ಅಲ್ಲಿದ್ದ ಕಾರ್ಮಿಕರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 6 ಜನರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಆದರೆ, ಬೆಂಕಿ ಅನಾಹುತಕ್ಕೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.