ಧಾರವಾಡ: ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಕೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು (Lokayukta Police) ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲಿಸಿದ ಧಾರವಾಡದ (Dharwad) 3ನೇ ಅಧಿಕ, ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯವು (Court) ಅಧಿಕಾರಿಯೊಬ್ಬರಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
ಕಿತ್ತೂರು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ನೂರ್ ಅಹ್ಮದ್ ಖಾನ್ ಎಂಬಾತನೇ ಶಿಕ್ಷೆಗೆ ಗುರಿಯಾದ ಅಧಿಕಾರಿಯಾಗಿದ್ದಾರೆ. ನೂರ್ ಅಹ್ಮದ್ ಖಾನ್ ಅವರ ಮೇಲೆ 2010ರ ನವೆಂಬರ್ 15 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.
ಸದ್ಯ ಅವರ ಮೇಲೆ ರೋಪ ಸಾಬೀತಾಗಿದ್ದು, ಒಂದು ವರ್ಷ ಜೈಲು, 25 ಸಾವಿರ ರೂ. ದಂಡ ವಿಧಿಸಲಾಗಿದೆ.








