Earthquake | ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ನಿನ್ನೆ ರಾತ್ರಿ 11.04 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ.
ಮೇಲಿಂದ ಮೇಲೆ ಸತತವಾಗಿ ಭೂಕಂಪನವಾಗುತ್ತಿರೊದಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.
ನಿನ್ನೆ ಸಾಯಂಕಾಲ 2.6 ತೀವ್ರತೆಯಲ್ಲಿ ಭೂಮಿ ನಡುಗಿತ್ತು. ನಂತರ ರಾತ್ರಿ 9.23 ಕ್ಕೆ ಹಾಗೂ ರಾತ್ರಿ 11.04 ಕ್ಕೆ ಭೂಮಿ ಕಂಪಿಸಿದೆ.

ಕಂಪನದ ತೀವ್ರತೆಯ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇಲಿಂದ ಮೇಲೆ ಭೂಕಂಪನ ಆಗುತ್ತಿರುವ ಕುರಿತು ಸರ್ಕಾರಕ್ಕೆ ನಾಳೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಿದ್ದಾರೆ.
ಈ ಹಿಂದೆ ಕೂಡ ಸಾಕಷ್ಟು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದೆ.








