Kodagu | ಕೊಡಗಿನ ಕೆಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ
ಮಡಿಕೇರಿ : ಕೊಡಗಿನ ಕೆಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಭೂಮಿ ಕಂಪಿಸಿದ ಅನುಭವವಾಗಿದೆ.
ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕಳೆದ ಎರಡು ದಿನಗಳಿಂದ ಕೊಡಗಿನ ದೇವಸ್ತೂರು, ನೇಗಳ್ಳೆ ಹಾಗೂ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿತ್ತು.
ಇದೀಗ ಇಂದು ಬೆಳಗ್ಗೆ ಸುಮಾರು 9:10 ರ ವೇಳೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.
ಪಟ್ಟಿಘಾಟ್ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಶಬ್ಧವಾಗಿದೆ. ಇದರಿಂದ ಜನರು ಭಯಭೀತರಾಗಿದ್ದಾರೆ.
ಜೊತೆಗೆ ಸಂಪಾಜೆ, ಚೆಂಬು, ಗೂನಡ್ಕ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಆತಂಕ ಹೊರಹಾಕಿದ್ದಾರೆ.