ದೆಹಲಿಯಲ್ಲಿ ಮತ್ತೆ ಕಂಪಿಸಿದ ಭೂಮಿ : 2.1 ರಷ್ಟು ತೀವ್ರತೆ
ನವದೆಹಲಿ: ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ಮತ್ತೊಮ್ಮೆ ಭೂಮಿ ಭೂಮಿ ಕಂಪಿಸಿದ್ದು, ಪಂಜಾಬಿ ಬಾಗ್ ಪ್ರದೇಶದಲ್ಲಿ ಭೂಕಂಪ ದಾಖಲಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮಧ್ಯಾಹ್ನ 12.02 ಕ್ಕೆ ಸಂಭವಿಸಿರುವ ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 2.1 ರಷ್ಟು ಅಳೆಯಲಾಗಿದೆ.
ಆದ್ರೆ ಈ ಪ್ರದೇಶದಿಂದ ಯಾವುದೇ ರೀತಿಯ ಹಾನಿಯ ಬಗ್ಗೆ ವರದಿಯಾಗಿಲ್ಲ. ಆದ್ರೆ ಹೀಗೆ ದೆಹಲಿಯಲ್ಲಿ ನಿರಂತರವಾಗಿ ಕಡಿಮೆ ತೀವ್ರತೆಯ ಸಣ್ಣ ನಡುಕ ಉಂಟಾಗುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಇನ್ನೂ ದೆಹಲಿಯಲ್ಲಿ ಒಂದು ತಿಂಗಳೊಳಗೆ ಇದು 2ನೇ ಬಾರಿಗೆ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.1ರಷ್ಟು ದಾಖಲಾಗಿದೆ. ಭೂಕಂಪನದ ಕೇಂದ್ರವು ಪಂಜಾಬಿ ಬಾಗ್ ಪ್ರದೇಶದಲ್ಲಿ 7 ಕಿ.ಮೀ ಆಳದಲ್ಲಿದ್ದು, ಮಧ್ಯಾಹ್ನ 12.02 ಗಂಟೆಗೆ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾಪನ ಅಧ್ಯಯನ ಕೇಂದ್ರ ತಿಳಿಸಿದೆ. ಈ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಕುರಿತು ವರದಿಯಾಗಿಲ್ಲ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








