ನೇಪಾಳದಲ್ಲಿ ಭಾರಿ ಮಳೆಗೆ ಭೂಕುಸಿತ : 11 ಮಂದಿ ಸಾವು Nepal
ಕಠ್ಮಂಡು : ಸತತ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ 11 ಮಂದಿ ಮೃತಪಟ್ಟು, 25 ಮಂದಿ ನಾಪತ್ತೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಒಬ್ಬರು ಭಾರತೀಯರಾಗಿದ್ದು, ಇಬ್ಬರು ಚೀನಾದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮೂವರು ಕಾರ್ಮಿಕರ ಮೃತದೇಹಗಳು ಸಿಂಧುಪಾಲ್‍ಚೌಕ್ ಜಿಲ್ಲೆಯ ಮೆಲಾಮ್ಚಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂದಹಾಗೆ ಕಳೆದ ಮಂಗಳವಾರದಿಂದ ನೇಪಾಳದಲ್ಲಿ ಭಾರಿ ಮಳೆಯಾಗುತ್ತಿದೆ.
ಇದರಿಂದ ರಸ್ತೆಗಳು, ಸೇತುವೆಗಳು, ಮನೆಗಳು ಹಾನಿಗೊಂಡಿವೆ. ಈಗಾಗಲೇ ನೂರಾರು ಮಂದಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.









