ನವದೆಹಲಿ: ದೇಶದಲ್ಲಿ #BoycottMaldives ಅಭಿಯಾನ ಜೋರಾಗಿದ್ದು, ಈಗ EaseMyTrip ಮಾಲ್ಡೀವ್ಸ್ ಫ್ಲೈಟ್ ಬುಕ್ಕಿಂಗ್ ರದ್ದು ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ (PM Narendra Modi) ಟೀಕಿಸಿದ್ದಕ್ಕೆ ಭಾರತೀಯ ನೆಟ್ಟಿಗರು ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಬೇಕೆದುಂ ಟ್ರೆಂಡ್ ಸೃಷ್ಟಿಯಾಗಿತ್ತು. ಇದಕ್ಕೆ ಬೆಂಬಲ ವ್ಯಕ್ತಪಡಿಸಿದ EaseMyTrip ಫ್ಲೈಟ್ ಬುಕ್ಕಿಂಗ್ ರದ್ದು ಮಾಡಿದೆ.
ದೇಶದ ಆನ್‌ಲೈನ್ ಟ್ರಾವೆಲ್ ಕಂಪನಿ EaseMyTrip ಸಿಇಒ ನಿಶಾಂತ್ ಪಿಟ್ಟಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬೈಕಾಟ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೋದಿ ಅವರನ್ನು ಟೀಕಿಸಿ ಭಾರತೀಯ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ (Maldives govt) ಅಮಾನುತು ಮಾಡಿದೆ.
ಲಕ್ಷದ್ವೀಪ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸ್ನಾರ್ಕಲಿಂಗ್ ಮಾಡಿ ಅಲ್ಲಿನ ಸಮುದ್ರ ತೀರದ ಫೋಟೋ ಹಾಕಿ ಲಕ್ಷದ್ವೀಪ ಪರ್ಯಾಯ ಪ್ರವಾಸಿ ತಾಣವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಮೂಲಕ ಭಾರತ ವಿರೋಧಿ ಧೋರಣೆ ಬೆಳೆಸಿಕೊಳ್ಳುತ್ತಿರುವ ಮಾಲ್ಡೀವ್ಸ್‌ಗೆ ಹೋಗಬೇಡಿ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಆಗ ಅಲ್ಲಿಯ ಸಚಿವರು ಮೋದಿಯನ್ನು ಟೀಕಿಸಿದ್ದರು. ಇದನ್ನು ಕಂಡ ಭಾರತೀಯ ನೆಟ್ಟಿಗರು ಕೆರಳಿ #BoycottMaldives ಅಭಿಯಾನ ಆರಂಭಿಸಿದ್ದರು.







