ದೇವಸ್ಥಾನದ ಪ್ರಸಾದ ಸೇವಿಸಿದ ಪರಿಣಾಮ 80 ಜನ ಅಸ್ವಸ್ಥರಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ಚೈತ್ರ ನವರಾತ್ರಿಯ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ 400ಕ್ಕೂ ಅಧಿಕ ಜನ ಪ್ರಸಾದ ಸೇವಿಸಿದ್ದರು. ಈ ವೇಳೆ ಸುಮಾರು 80ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವನ್ನಪ್ಪಿದ್ದಾನೆ.
ಅಲ್ಲದೇ, ಆಸ್ಪತ್ರೆಗೆ ದಾಖಲಾದವರ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಸಾದದಲ್ಲಿ ಯಾವ ವಿಷಕಾರಿ ಅಂಶ ಇತ್ತು ಎಂಬುವುದರ ಕುರಿತು ತನಿಖೆ ನಡೆಯುತ್ತಿದೆ.