ನವದೆಹಲಿ: ಮುಡಾ ಹಗರಣ (MUDA Scam Case) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ.
ಲೋಕಾಯುಕ್ತ ಎಫ್ ಐಆರ್ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ (Enforcement Directorate) ಇಸಿಐಆರ್ ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಹೆಸರುಗಳ ಉಲ್ಲೇಖವಿದೆ.
ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ. ಅಲ್ಲದೇ, ಅಧಿಕಾರಿಗಳು ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು. ಮುಡಾ ಕಚೇರಿ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ನಿವಾಸದ ಮೇಲೆ ಸಾಧ್ಯತೆಯಿದೆ.