ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ನಟಿ ತಮನ್ನಾ ಭಾಟಿಯಾ (Tamannaah Bhatia)ಗೆ ಇಡಿ ಶಾಕ್ ಎದುರಾಗಿದೆ.
ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. HPZ ಟೋಕನ್ ಮೊಬೈಲ್ ಅಪ್ಲಿಕೇಶನ್ ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ತಮನ್ನಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಹೀಗಾಗಿ ಗುರುವಾರ (ಅ.17) ಗುವಾಹಟಿಯ ಇಡಿ ಕಚೇರಿಗೆ ನಟಿ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಅಪ್ಲಿಕೇಶನ್ ಪ್ರಚಾರ ಮಾಡಿದ್ದಕ್ಕಾಗಿ ವಿಚಾರಣೆ ನಡೆಸಲಾಗಿದೆ. ಆದರೆ, ಅವರ ವಿರುದ್ಧ ಪ್ರಕರಣ ದಾಖಲಾಗಿಲ್ಲ.