ನ್ಯಾಷನಲ್ ಹೆರಾಲ್ಡ್ ಪ್ರಕರಣ – 2ನೇ ದಿನವೂ ರಾಹುಲ್ ಗಾಂಧಿ ವಿಚಾರಣೆಗೆ ಹಾಜರ್….
ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಎರಡನೇ ದಿನವೂ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದೆ.
ರಾಹುಲ್ ನ E D ವಿಚಾರಣೆ ನಡೆಸುತ್ತಿರುವುದನ್ನ ಖಂಡಿಸಿ ದೆಹಲಿಯ ರಸ್ತೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮವಾರ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರವೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮುಖಂಡ ಹರೀಶ್ ರಾವತ್ ಹೇಳಿದ್ದಾರೆ.
ಪೊಲೀಸರು ಅಲರ್ಟ್ ಆಗಿದ್ದು, ಟೆನ್ ಜನ್ ಪಥ್ ಮತ್ತು ಕಾಂಗ್ರೆಸ್ ಪಕ್ಷದ ಕಚೇರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಮಂಗಳವಾರ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. “ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ. ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪ್ರಯತ್ನಿಸುವವರೆಗೂ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯುತ್ತದೆ,” ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ದೆಹಲಿಯಲ್ಲಿ ಟ್ರಾಫಿಕ್ ಬಗ್ಗೆ ಪೊಲೀಸರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ಗೋಲ್ಮೆಥಿ ಜಂಕ್ಷನ್, ತುಘಲಕ್ ರಸ್ತೆ ಜಂಕ್ಷನ್, ಕ್ಲಾರಿಡ್ಜ್ ಜಂಕ್ಷನ್, ಕ್ಯೂ-ಪಾಯಿಂಟ್ ಜಂಕ್ಷನ್, ಸುನ್ಹಹರಿ ಮಸೀದಿ ಜಂಕ್ಷನ್, ಮೌಲಾನಾ ಆಜಾದ್ ರಸ್ತೆ ಜಂಕ್ಷನ್ ಮತ್ತು ಮಾನ್ ಸಿಂಗ್ ರೋಡ್ ಜಂಕ್ಷನ್ ನಡುವೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಪ್ರಯಾಣವನ್ನು ನಿರ್ಬಂಧಿಸಿ ದೆಹಲಿ ಸಂಚಾರ ಪೊಲೀಸರು ಹೇಳಿಕೆ ನೀಡಿದ್ದಾರೆ.