ಮಾಧ್ಯಮಿಕ ಮಟ್ಟದಲ್ಲಿ ಕೃಷಿಗೆ ಸಂಬಂಧಿಸಿದ ಶಿಕ್ಷಣ – ಪ್ರಧಾನಿ ಮೋದಿಯಿಂದ ಸುಳಿವು
ಲಕ್ನೋ, ಅಗಸ್ಟ್31: ಆಗಸ್ಟ್ 29 ರಂದು ಝಾನ್ಸಿ ರಾಣಿ ಲಕ್ಷ್ಮಿ ಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತಾತ್ಮಕ ಕಟ್ಟಡಗಳನ್ನು ಉದ್ಘಾಟಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಕೃಷಿಯನ್ನು ಮಾಧ್ಯಮಿಕ ಮಟ್ಟದ ಪಠ್ಯ ಪುಸ್ತಕದಲ್ಲಿ ಪರಿಚಯಿಸಲು ಚಿಂತನೆ ನಡೆಸಿರುವುದಾಗಿ ಮಾಹಿತಿ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದ ಪ್ರಧಾನಿ ಮೋದಿ ಕೃಷಿ ಕ್ಷೇತ್ರವನ್ನು ಆತ್ಮನಿರ್ಭರ (ಸ್ವಾವಲಂಬಿ) ಮಾಡುವಂತೆ ಪ್ರೇರೇಪಿಸಿದರು.
ನಾವು ಕೃಷಿಯೊಂದಿಗೆ ಸಂಶೋಧನೆಯನ್ನು ಜೋಡಿಸಲು ಪ್ರಯತ್ನಿಸುತ್ತಿದ್ದೇವೆ. ಸಣ್ಣ ರೈತರಿಗೆ ವೈಜ್ಞಾನಿಕ ಸಂಶೋಧನೆ ಲಭ್ಯವಾಗುವಂತೆ ಮಾಡುವುದು ನಮ್ಮ ಉದ್ದೇಶ. ವಿಶ್ವವಿದ್ಯಾಲಯ, ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.
https://twitter.com/narendramodi/status/1299614504637009921
ಕೃಷಿಯನ್ನು ಒಂದು ವಿಷಯವಾಗಿ ಮಧ್ಯಮ ಶಾಲಾ ಮಟ್ಟದಲ್ಲಿ ಪರಿಚಯಿಸಬೇಕು. ಕೃಷಿಗೆ ಸಂಬಂಧಿಸಿದ ಶಿಕ್ಷಣ ಮತ್ತು ಅದರ ಪ್ರಾಯೋಗಿಕ ಅನ್ವಯವನ್ನು ಶಾಲೆಗಳಿಗೆ ಕೊಂಡೊಯ್ಯುವುದು ಮುಖ್ಯ ಎಂದು ಪ್ರಧಾನಿ ಹೇಳಿದರು.
ವಿಶ್ವವಿದ್ಯಾನಿಲಯವನ್ನು 2014 ರಲ್ಲಿ ಪ್ರಾರಂಭಿಸಲಾಗಿದ್ದು, ಆದರೆ ಶನಿವಾರ ಔಪಚಾರಿಕವಾಗಿ ಉದ್ಘಾಟಿಸಲಾಗಿದೆ. ಮೂಲಸೌಕರ್ಯಗಳ ಕೊರತೆಯಿಂದ ಇದು ಝಾನ್ಸಿಯ ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆಯಿಂದ ಕಾರ್ಯನಿರ್ವಹಿಸುತ್ತಿತ್ತು.








