ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರವಿದೆ – Saaksha Tv
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ, ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿ ಪಡಿಸುವ ಅಧಿಕಾರವಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯದ ಕೆಲ ಶಾಲಾ-ಕಾಲೇಜುಗಳ ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಸಂಭಂದ ತೀರ್ಪು ನೀಡಿದ ಹೈಕೋರ್ಟ್ ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ, ಸರಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಹೇಳಿದೆ.
ಅಲ್ಲದೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳು ಹೈ ಕೋರ್ಟ್ ವಜಾ ಮಾಡಿದ್ದು, ಸರಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಎಂದು ಹೇಳಿದೆ.