ಮಂಗಳೂರು: ದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಕೇವಲ ಹೊಟ್ಟೆ ತುಂಬಿಸುವುದನ್ನು ಕಲಿಸಬಾರದು. ಸಂಸ್ಕಾರವನ್ನೂ ಕಲಿಸಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅಭಿಪ್ರಾಯ ಪಟ್ಟಿದ್ದಾರೆ.
ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರ ಸಮ್ಮತಿಯೊಂದಿಗೆ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಪಂಚ ಪೋಷಾತ್ಮಕ ವಿಚಾರವನ್ನು ದೃಷ್ಟಿಯಲ್ಲಿಟ್ಟು ಈ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣವನ್ನು ಸರಿಯಾಗಿ ಉಪಯೋಗಿಸುವ ಬುದ್ದಿ ಸಹ ಅವಶ್ಯಕ. ಎಲ್ಲರನ್ನು ಪ್ರೀತಿಸುವಂತೆ ನಮ್ಮ ದೇಶದ ಪರಂಪರೆ, ಸಂಸ್ಕೃತಿ ಕಲಿಸುತ್ತದೆ. ನಮ್ಮ ಜ್ಞಾನ ಉತ್ಕೃಷ್ಟವಾಗಿರಬೇಕು. ದೇಶದ ಸಂಸ್ಕ್ರತಿ, ಪರಂಪರೆ, ದುರ್ಬಲರ ರಕ್ಷಣೆಗೆ ನಾವೆಲ್ಲ ಸಿದ್ಧರಾಗಿ ನಿಲ್ಲಬೇಕು ಎಂದಿದ್ದಾರೆ.








