ಕೊರೊನಾ 2ನೇ ಅಲೆ ತಡೆಯ ನಿರ್ಮೂಲನೆಗೆ ಇರುವ ಏಕಮಾತ್ರ ಪರಿಹಾರ ವ್ಯಾಪಕ ಲಸಿಕೆ – ಅಮೆರಿಕಾ
ಅಮೆರಿಕಾ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಲಸಿಕಾ ಅಭಿಯಾನವನ್ನು ಅಗಾಧ ಪ್ರಮಾಣದಲ್ಲಿ ಹೆಚ್ಚಿಸುವುದು ಭಾರತದಲ್ಲಿ ಈಗ ನೆಲೆಸಿರುವ ಕೊರೋನ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ಏಕೈಕ ವಿಧಾನವಾಗಿದೆ ಹಾಗೂ ಈ ನಿಟ್ಟಿನಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳ ನಡುವಿನ ಅಂತರವನ್ನು ವಿಸ್ತರಿಸುವುದು ಸರಿಯಾದ ಕ್ರಮವಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಯಂಟನಿ ಫೌಚಿ ಹೇಳಿದ್ದಾರೆ.
ಭಾರತದಲ್ಲಿ ಈಗ ಇರುವಂಥ ಪರಿಸ್ಥಿತಿಯನ್ನು ನಿಭಾಯಿಸುವ ವಿಧಾನವೆಂದರೆ ಹೆಚ್ಚೆಚ್ಚು ಜನರಿಗೆ ಎಷ್ಟು ಸಾಧ್ಯವೋ ಅಷ್ಟು ಬೇಗ ಲಸಿಕೆ ಹಾಕುವುದು. ಲಸಿಕೆ ಅಭಿಯಾನವನ್ನು ತೀವ್ರಗೊಳಿಸುವ ವಿಧಾನಗಳನ್ನು ಹುಡುಕಬೇಕಾಗಿದೆ. ಇದೇ ಸರಿಯಾದ ವಿಧಾನವೆಂದು ನನಗನಿಸುತ್ತದೆ ಎಂದು ಗುರುವಾರ ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಡಾ. ಫೌಚಿ ಹೇಳಿದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.