ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ :  ಡಾ.ಕೆ.ಸುಧಾಕರ್

Namratha Rao by Namratha Rao
January 15, 2022
in Newsbeat, State, ರಾಜ್ಯ
Karnataka Dr. K. Sudhakar saaksha tv
Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ :  ಡಾ.ಕೆ.ಸುಧಾಕರ್

ಬೆಂಗಳೂರು : ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್ ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೋವಿಡ್ ಮೊದಲ ಅಲೆಯಲ್ಲಿ ಆರೋಗ್ಯ ಸಿಬ್ಬಂದಿಗೆ ಹೊಸ ವೈರಾಣು ಕುರಿತು ತರಬೇತಿ ನೀಡಬೇಕಿತ್ತು. ಆದರೆ ಲಾಕ್ ಡೌನ್ ಮೊದಲಾದ ಕಾರಣಗಳಿಂದಾಗಿ ತರಬೇತಿ ನೀಡಲು ಸಾಧ್ಯವಾಗಲಿಲ್ಲ. .

ಆ ಸಂದರ್ಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ನೆರವಿನಲ್ಲಿ ತಂತ್ರಜ್ಞಾನ ಬಳಸಿ 2.5 ಲಕ್ಷ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಈ ಬಗೆಯ ಪರಿಣಾಮಕಾರಿ ತಂತ್ರಜ್ಞಾನ ಬಳಕೆಯನ್ನು ಕೇಂದ್ರ ಸರ್ಕಾರ ಕೂಡ ಗುರುತಿಸಿದೆ.

Karnataka Dr. K. Sudhakar saaksha tv

5 ಟಿ ಕ್ರಮವನ್ನು ಕೂಡ ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಮೂರನೇ ಅಲೆಯಲ್ಲಿ 2-3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದರೂ ತೀವ್ರತೆ ಕಡಿಮೆ ಇದೆ. 93% ರೋಗಿಗಳು ಮನೆ ಐಸೋಲೇಶನ್ ನಲ್ಲೇ ಇದ್ದಾರೆ.

5-6% ಜನರು ಆಸ್ಪತ್ರೆ ಹಾಗೂ 1% ಜನರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ ಎಂದರು.

ಸ್ಟೆಪ್ ಒನ್ ಸಂಸ್ಥೆಯು ಕೋವಿಡ್ ಹೋರಾಟದಲ್ಲಿ ಸರ್ಕಾರದೊಂದಿಗೆ ಭಾಗಿಯಾಗಿ ಸಾವಿರಾರು ವೈದ್ಯರೊಂದಿಗೆ ಕೆಲಸ ಮಾಡಿ ಮನೆ ಐಸೋಲೇಶನ್ ಕ್ರಮ ಯಶಸ್ವಿಯಾಗಲು ನೆರವಾಗಿದೆ.

ಇದರಿಂದಾಗಿ ರಾಜ್ಯ ದೇಶದಲ್ಲೇ ಮಾದರಿಯಾಗಿದೆ. ನೀತಿ ಆಯೋಗ ಕೂಡ ಹೋಮ್ ಐಸೋಲೇಶನ್ ಹಾಗೂ ಇದಕ್ಕೆ ಸಂಬಂಧಿಸಿದ ತಾಂತ್ರಿಕ ನೆರವುಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದೆ.

ಎಲ್ಲಾ ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರೊಫೆಸರ್ ಗಳ ಸಹಯೋಗದಿಂದಾಗಿ ಮನೆ ಐಸೋಲೇಶನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗಿದೆ ಎಂದರು.

10 ಸಾವಿರ ಸಿಬ್ಬಂದಿ ನಿಯೋಜನೆ

ಈ ಸಮಯದಲ್ಲಿ ಹೋಮ್ ಐಸೋಲೇಶನ್ ನಲ್ಲಿರುವವರ ಆರೋಗ್ಯ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ.

ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು.

42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ವಿವರಿಸಿದರು.

ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ.

ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದರು.

Tags: #Saaksha TVbangaloreCorona VirusDr. K Sudhakar
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram