National: ಭಾರತದಿಂದ ಗೋಧಿ ಆಮದು ಮಾಡಿಕೊಳ್ಳಲು ಮುಂದಾದ ಈಜಿಪ್ಟ್

1 min read
Wheat Export Saaksha Tv

ಭಾರತದಿಂದ ಗೋಧಿ ಆಮದು ಮಾಡಿಕೊಳ್ಳಲು ಮುಂದಾದ ಈಜಿಪ್ಟ್

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿದ್ದು, ಈ ಮಧ್ಯೆ ಈಜಿಪ್ಟ್ ಭಾರತದಿಂದ ಗೋದಿ ಖರೀದಿಸಲು ಒಪ್ಪಿಗೆ ನೀಡಿದೆ.

ರಷ್ಯಾ ಮತ್ತು ಉಕ್ರೇನ್ ನಿಂದ ಈಜಿಪ್ಟ್ ಗೋದಿಯನ್ನು ಆಮದು ಮಾಡಿಕೊಳ್ಳುತ್ತಿತ್ತು. ಆದರೆ ಪ್ರಸ್ಥುತ ಎರಡು ದೇಶಗಳು ಕಾದಾಡುತ್ತಿವೆ. ಹೀಗಾಗಿ ಈಜಿಪ್ಟ್ ಭಾರತದಿಂದ 3 ಮಿಲಿಯನ್ ಟನ್ ಗೋಧಿ ಖರೀದಿಸಲು ಮುಂದಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್‌ ಗೋಯಲ್‌ ತಿಳಿಸಿದ್ದಾರೆ. ಈಜಿಪ್ಟ್ ಗೆ ಉತ್ತಮ ಗುಣಮಟ್ಟದ ಗೋಧಿಯನ್ನು ರಫ್ತು ಮಾಡಲಿದ್ದೇವೆ.

2021 ರಲ್ಲಿ ಈಜಿಪ್ಟ್ 6.1 ದಶಲಕ್ಷ ಟನ್ (mt) ಗೋಧಿಯನ್ನು ಆಮದು ಮಾಡಿಕೊಂಡಿದೆ. ಭಾರತವು ಈಜಿಪ್ಟ್ ಗೆ ಗೋಧಿಯನ್ನು ರಫ್ತು ಮಾಡಬಹುದಾದ ಮಾನ್ಯತೆ ಪಡೆದ ದೇಶಗಳ ಪಟ್ಟಿಯಲ್ಲಿ ಇಲ್ಲಿಯವರೆಗೆ ಸ್ಥಾನ ಪಡೆದಿರಲಿಲ್ಲ.ಈಗ ಪಡೆದುಕೊಂಡಿದೆ.

ರಷ್ಯಾ ಮತ್ತು ಉಕ್ರೇನ್‌ನಿಂದ ಈಜಿಪ್ಟ್‌ ಶೇ.80ರಷ್ಟು ಗೋಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು 2021ರಲ್ಲಿ ಅಂದಾಜು 2 ಶತಕೋಟಿ ಡಾಲರ್‌ ಮೌಲ್ಯದ ಗೋಧಿಯನ್ನು ಆಮದು ಮಾಡಿಕೊಂಡಿದೆ.

ಬಾಂಗ್ಲಾದೇಶ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಶ್ರೀಲಂಕಾ, ಓಮನ್ ಮತ್ತು ಮಲೇಷ್ಯಾದಂತಹ ದೇಶಗಳಲ್ಲಿ ಗೋಧಿಗೆ ಹೆಚ್ಚಿನ ಬೇಡಿಕೆಯಿದ್ದು ಭಾರತ ರಫ್ತು ಮಾಡುತ್ತಿದೆ. ಅಷ್ಟೇ ಅಲ್ಲದೇ ಯೆಮೆನ್, ಅಫ್ಘಾನಿಸ್ತಾನ ಮತ್ತು ಇಂಡೋನೇಷ್ಯಾ ಸೇರಿದಂತೆ ಇತರ ದೇಶಗಳಿಗೆ ಗೋಧಿ ರಫ್ತು ಹೆಚ್ಚಿಸಲು ಭಾರತ ಪ್ರಯತ್ನಗಳನ್ನು ಮಾಡುತ್ತಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd