ಟಿ-20 ಕ್ರಿಕೆಟ್ ನ ಬೆಸ್ಟ್ ಕ್ಯಾಪ್ಟನ್ ಇಯಾನ್ ಮೊರ್ಗಾನ್.. ಧೋನಿ ದಾಖಲೆ ಅಳಿಸಿದ ಇಂಗ್ಲೆಂಡ್ ಕ್ಯಾಪ್ಟನ್
ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗಾನ್ ಅವರು ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ ಜಯ ಸಾಧಿಸಿ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿತ್ತು.
ಅಷ್ಟೇ ಅಲ್ಲ ಈ ಗೆಲುವಿನ ಮೂಲಕ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗಾನ್ ಅವರು ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ಗರಿಷ್ಠ ಜಯ ಸಾಧಿಸಿದ್ದ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಹೌದು, ಇಯಾನ್ ಮೊರ್ಗಾನ್ ಅವರು ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಅಫಘಾನಿಸ್ತಾನದ ನಾಯಕ ಅಸ್ಗರ್ ಅಫ್ಘನ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಇಯಾನ್ ಮೊರ್ಗಾನ್ ಅವರು 68 ಟಿ-ಟ್ವೆಂಟಿ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 43 ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ.
ಈ ಹಿಂದೆ ಟೀಮ್ ಇಂಡಿಯಾದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ ಅವರು, 72 ಟಿ-ಟ್ವೆಂಟಿ ಪಂದ್ಯಗಳಲ್ಲಿ 42 ಪಂದ್ಯಗಳನ್ನು ಗೆದ್ದುಕೊಂಡಿದ್ದರು.
ಹಾಗೇ ಅಫಘಾನಿಸ್ತಾನದ ಅಸ್ಗರ್ ಅಫ್ಘನ್ ಅವರು 52 ಟಿ-ಟ್ವೆಂಟಿ ಪಂದ್ಯಗಳಲ್ಲಿ 42 ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ.
ಸದ್ಯ ಧೋನಿ ಮತ್ತು ಅಸ್ಗರ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಆದ್ರೆ ಇಯಾನ್ ಮೊರ್ಗಾನ್ ಅವರು ಇನ್ನೂ ಆಡುತ್ತಿದ್ದಾರೆ. ಅಲ್ಲದೆ ಈ ದಾಖಲೆಯನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳುವ ಅವಕಾಶವೂ ಇಯಾನ್ ಮೊರ್ಗಾನ್ ಅವರಿಗಿದೆ.
ಇಯಾನ್ ಮೊರ್ಗಾನ್ ಅವರ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡ ಮೊಟ್ಟ ಮೊದಲ ಬಾರಿ ಏಕದಿನ ವಿಶ್ವಕಪ್ ಅನ್ನು ಗೆದ್ದುಕೊಂಡಿತ್ತು. ಅದೇ ರೀತಿ ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್ ಗೆದ್ದು ಇಯಾನ್ ಮೊರ್ಗಾನ್ ಅವರು ಧೋನಿಯ ದಾಖಲೆಯನ್ನು ಅಳಿಸಿ ಹಾಕ್ತಾರಾ ಅನ್ನೋದನ್ನು ಕಾದು ನೋಡಬೇಕು.