ನವದೆಹಲಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲ ಹಾಗೂ ಹರಿಯಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತವು ಆ.20ರಂದು ಎರಡನೇ ಹಂತ ಆ. 29 ಹಾಗೂ ಮೂರನೇ ಹಂತ ಸೆ.5ರಂದು ನಡೆಯಲಿದೆ. ಹರಿಯಾಣದಲ್ಲಿ ಅ.1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ಕ್ಕೆ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 87.09 ಲಕ್ಷ ಮತದಾರರು ನೋಂದಣಿಯಾಗಿದ್ದಾರೆ. 44.46 ಪುರುಷರು, 42 ಲಕ್ಷ ಮಹಿಳಾ ಮತದಾರರಿದ್ದಾರೆ. ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 2.01 ಕೋಟಿ ಮತದಾರರಿದ್ದಾರೆ. ಗ್ರಾಮೀಣ ಭಾಗದಲ್ಲಿ 13,497 ಹಾಗೂ ನಗರ ಭಾಗದಲ್ಲಿ 7132 ಮತದಾನ ಕೇಂದ್ರಗಳಿವೆ. ಶಾಂತ ರೀತಿಯಿಂದ ಚುನಾವಣೆ ನಡೆಸಲು ಸಹಕರಿಸುವಂತೆ ಆಯೋಗ ಸೂಚಿಸಿದೆ.








