ಪಂಚರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಫಿಕ್ಸ್!
ನವದೆಹಲಿ : ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ವಾಗಿದೆ.
ದೆಹಲಿಯಲ್ಲಿ ಸಿಇಸಿ ಸುಶೀಲ್ ಚಂದ್ರ ಸುದ್ದಿಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಮಾಡಿದ್ದಾರೆ. 5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ.
ಫೆಬ್ರವರಿ 14ರಂದು ಪಂಜಾಬ್, ಗೋವಾ, ಉತ್ತರಾಖಂಡ್‌ನಲ್ಲಿ ಮತದಾನ ನಡೆಯಲಿದೆ.
ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.
https://twitter.com/ANI/status/1479755161987731457?ref_src=twsrc%5Etfw%7Ctwcamp%5Etweetembed%7Ctwterm%5E1479755161987731457%7Ctwgr%5E%7Ctwcon%5Es1_c10&ref_url=https%3A%2F%2Ftv9kannada.com%2Felections%2Felection-commission-announces-the-schedule-for-assembly-elections-to-goa-punjab-manipur-uttarakhand-and-uttar-pradesh-gbd-319226.html
ಇತ್ತ ಉತ್ತರ ಪ್ರದೇಶದ 403 ಕ್ಷೇತ್ರಗಳಿಗೆ 7ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.
ಮಣಿಪುರದ 60 ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ.
ಫೆಬ್ರವರಿ 27ರಂದು ಮೊದಲ ಹಂತದ ಮತದಾನ, ಮಾರ್ಚ್ 3ರಂದು 2ನೇ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.
ಕೊರೊನಾ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಹಲವು ನಿರ್ಬಂಧ ವಿಧಿಸಲಾಗಿದೆ.
ಪಾದಯಾತ್ರೆ, ರೋಡ್‌ಶೋ, ರಾಲಿಗಳಿಗೆ, ಸಾರ್ವಜನಿಕ ಸಭೆಗಳಿಗೆ ಅವಕಾಶವಿಲ್ಲ.
ಸಾರ್ವಜನಿಕ ಸಭೆಗಳಿಗೆ ಜನವರಿ 15ರವರೆಗೆ ನಿರ್ಬಂಧ ಇರಲಿದೆ. ಗೆಲುವಿನ ಬಳಿಕ ಸಾರ್ವಜನಿಕ ಸಂಭ್ರಮಾಚರಣೆಗೆ ಅವಕಾಶವಿಲ್ಲ.








